ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20ರಂದು ಸಾಧನೆ ಸಮಾವೇಶ ಹಾಗೂ ವಿವಿಧ ಸವಲತ್ತುಗಳ ವಿತರಣಾ ಸಮಾವೇಶ ನಡೆಯಲಿದೆ. ಹೀಗಾಗಿ ವಿಜಯಪುರ ಜಿಲ್ಲೆಯಾದ್ಯಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕಾರಿಸುವಂತೆ ಕೋರಲಾಗಿದೆ.
ಅಂದು ಹೊಸಪೇಟೆಯಲ್ಲಿ ಆಯೋಜಿಸಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ವಿಜಯಪುರದಿಂದ ಒದಗಿಸಲಾಗಿದೆ. ಮೇ 19, 2025ರ ಸಂಜೆಯಿಂದ ಮೇ 21ರ ಬೆಳಗಿನವರೆಗೆ ದೈನಂದಿನ ಕಾರ್ಯಾಚರಣೆಯಾಗುತ್ತಿರುವ ಟ್ರಿಪ್ ಗಳಲ್ಲಿ ವ್ಯತ್ಯಯ ಉಂಟಾಗುವುದರಿಂದ ಪ್ರಯಾಣಿಕರು ಸಹಕರಿಸಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.