ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ಸಿಂದಗಿ, ಇಂಡಿ, ಮುದ್ದೇಬಿಹಾಳ, ಬಸವನ ಬಾಗೇವಾಡಿ ಹಾಗೂ ವಿಜಯಪುರ ತಾಲೂಕಿನ 29 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 23ರಂದು ಆದರ್ಶ(Adarsha Vidyalaya) ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆ ನಡೆಯಲಿದೆ. ಹೀಗಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶಿಸಿದ್ದಾರೆ. ಮುಂಜಾನೆ 9 ಗಂಟೆಯಿಂದ ಪರೀಕ್ಷೆ ಮುಗಿಯುವ ತನಕ ಕಂಪ್ಯೂಟರ್ ಸೆಂಟರ್ ಗಳು, ಝರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗಿದೆ.