ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಗರದ ಹೊರವಲಯದ ಎನ್ಎಚ್-50ರಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಸುಮಾರು 40 ಟನ್ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲಾಗಿತ್ತು. ತಮಿಳುನಾಡಿನ ನೋಂದಣಿ ಹೊಂದಿದ ಲಾರಿಯಲ್ಲಿ 600ಕ್ಕೂ ಹೆಚ್ಚು ಪ್ಲಾಸ್ಟಿಕ್ ಮೂಟೆಗಳಲ್ಲಿ ಸಾಗಿಸಲಾಗುತ್ತಿತ್ತು. ದಾಳಿ ವೇಳೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿ ಬಿಟ್ಟು ಪರಾರಿಯಾಗಿದ್ದಾರೆ. ಕೊಪ್ಪಳ, ಶಿವಮೊಗ್ಗ, ಬಾಗಲಕೋಟೆ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅಕ್ಕಿಯನ್ನು ಸಂಗ್ರಹಿಸಿಲಾಗಿತ್ತು ಅನ್ನೋ ಶಂಕೆ ವ್ಯಕ್ತವಾಗಿದೆ. ಜಲನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲು ಮಾಡಲಾಗಿದೆ.