ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ತಡರಾತ್ರಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಹೋಟೆಲ್ ವೊಂದು ಸುಟ್ಟು ಹೋದ ಘಟನೆ ನಗರದ ಸೋಲಾಪುರ ರಸ್ತೆಯಲ್ಲಿ ನಡೆದಿದೆ. ಇಲ್ಲಿನ 3 ಅಂತಸ್ತಿನ ಕೃಷ್ಣ ಪ್ಯಾಲೇಸ್ ನಲ್ಲಿ ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ನೋಡು ನೋಡುತ್ತಿದ್ದಂತೆ ಎಲ್ಲ ಕಡೆ ವ್ಯಾಪಿಸಿಕೊಂಡಿದೆ. ಇದರಿಂದಾಗಿ ಹೋಟೆಲ್ ಮುಂಭಾಗ ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಗ್ಯಾಸ್ ಲೀಕ್ ಅಥವ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಗಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಪೊಲೀಸ್ ತನಿಖೆಯಿಂದ ಈ ಬಗ್ಗೆ ತಿಳಿದು ಬರಬೇಕಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಆಗಿಲ್ಲ. ಈ ಘಟನೆಯಿಂದ ಸಾಕಷ್ಟು ಹಾನಿಯಾಗಿದೆ. ಆದರ್ಶ ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹದೊಂದು ಅನಾಹುತ ನಡೆದಿದೆ.




