ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿದ್ದ ಗುರುಲಿಂಗಪ್ಪ ಅಂಗಡಿ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಣ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಠಕ್ಕರ್ ಕೊಟ್ಟಿದ್ದಾರೆ. ಬಿಎಸ್ವೈ ಕುಟುಂಬದ ಮೇಲೆ ಸದಾ ಕತ್ತಿ ಮಸಿಯುತ್ತಿರುವ ಯತ್ನಾಳಗೆ ತವರು ಜಿಲ್ಲೆಯಲ್ಲಿಯೇ ಹಿನ್ನಡೆಯಾಗಿದೆ. ನಿರ್ಗಮಿತ ಜಿಲ್ಲಾಧ್ಯಕ್ಷ ಎರ್.ಎಸ್ ಪಾಟೀಲ ಕೂಚಬಾಳ ಬಾವುಟ ನೀಡಿ, ಶಾಲು ಹೊದಿಸಿ ಅಧಿಕಾರ ಹಸ್ತಾಂತರಿಸಿದರು.
ಮಾಜಿ ಶಾಸಕರಾದ ಎ.ಎಸ್ ಪಾಟೀಲ ನಡಹಳ್ಳಿ, ಎಸ್.ಕೆ ಬೆಳ್ಳುಬ್ಬಿ ಅವರು ರಾಜ್ಯಾಧ್ಯಕ್ಷರೊಂದಿಗೆ ಕೈ ಜೋಡಿಸಿ ಕಳೆದ ಬಾರಿ ಚುನಾವಣೆಯಲ್ಲಿ ತಮಗೆ ಸೋಲಾಗಲು ಕಾರಣರಾದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ. ತವರ ಜಿಲ್ಲೆಯಲ್ಲಿಯೇ ಹಿಡಿತ ಸಾಧಿಸಲು ಆಗದ ಯತ್ನಾಳ ರಾಜ್ಯಾಧ್ಯಕ್ಷ ಹುದ್ದೆ ಪಡೆಯುತ್ತಾರ ಅನ್ನೋ ಪ್ರಶ್ನೆ ಮೂಡಿದೆ. ಇದನ್ನು ಅವರು ಹೇಗೆ ಸ್ವೀಕರಿಸುತ್ತಾರೆ ಅನ್ನೋದು ಸಹ ಕುತೂಹಲ ಮೂಡಿಸಿದೆ.
ಇನ್ನು ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಶಾಸಕರಾದ ನಡಹಳ್ಳಿ, ಎಸ್.ಕೆ ಬೆಳ್ಳುಬ್ಬಿ, ರಮೇಶ ಭೂಸನೂರ, ಸಂಜೀವ ಐಹೊಳೆ, ಚಂದ್ರಶೇಖರ ಕವಟಗಿ, ವಿವೇಕಾನಂದ ಡಬ್ಬಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.