ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ನಗರದ ಹುಡ್ಕೋ ಕಾಲೋನಿ ಹಾಗೂ ರಾಘವೇಂದ್ರ ಕಾಲೋನಿ ಹತ್ತಿರ ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸಿ ಆಟೋಗಳಿಗೆ ತುಂಬಿಸುತ್ತಿದ್ದ ವೇಳೆ ದಾಳಿ ಮಾಡಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ನಾಲ್ಕು ಗೃಹ ಬಳಕೆ ಸಿಲಿಂಡರ್ ಹಾಗೂ ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದು, ಜಲನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಿಸಲಾಗಿದೆ.
ದಾಳಿಯಲ್ಲಿ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ಜಲನಗರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ ಶಂಖ, ಪೊಲೀಸ್ ಸಿಬ್ಬಂದಿ ವಿ.ಎಂ ಪವಾರ, ಪಿ.ಆರ್ ರಾಠೋಡ, ಎಸ್.ವೈ ನಾಟೀಕಾರ, ಎಚ್.ಎನ್ ಪೂಜಾರಿ, ಎನ್.ಬಿ ಚವ್ಹಾಣ, ಸಚೀನಕುಮಾರ ನಂದೇಶ ಹಾಗೂ ಎಂ.ಆರ್ ಶಿಂಧೆ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.