ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕರ್ತವ್ಯಲೋಪ, ಅಸಭ್ಯ ವರ್ತನೆ, ದುರ್ನಡತೆ ಆರೋಪಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ದ್ವಿತೀಯ ದರ್ಜೆ ಸಹಾಯಕಿಯನ್ನು ಅಮಾನತುಗೊಳಿಸಲಾಗಿದೆ. ಎ.ಎಸ್ ಗೌಂಡಿ ಅಮಾನತುಗೊಂಡ ದ್ವಿತೀಯ ದರ್ಜೆ ಸಹಾಯಕಿ ಆಗಿದ್ದಾರೆ. ಇಲಾಖೆಯ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.