ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ತಮ್ಮ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಇವರಿಗೆ ಮಹಾನಗರ ಪಾಲಿಕೆಯ ಸದಸ್ಯರುಗಳಾದ ಶಿವರುದ್ರ ಬಾಗಲಕೋಟ, ರಾಹುಲ ಜಾದವ, ಅಶೋಕ ನ್ಯಾಮಗೊಂಡ್, ರಾಜಶೇಖರ್ ಮಗಿಮಠ, ಕುಮಾರ ಗಡಗಿ, ಗಿರೀಶ ಬಿರಾದಾರ ಅವರು ಬೆಂಬಲ ಸೂಚಿಸಿದರು.
ಕಳೆದ ನಾಲ್ಕು ದಿನಗಳಿಂದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ 25,000ಕ್ಕೂ ಹೆಚ್ಚು ಅಧಿಕಾರಿ, ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದು ನ್ಯಾಯಯುತವಾಘಿದೆ ಇದಕ್ಕೆ ಕೂಡಲೇ ಸರ್ಕಾರ ಸ್ಪಂದಿಸಬೇಕೆಂದು ಹೇಳಿದರು. ನೌಕರರ ಕಷ್ಟ ಕಾರ್ಪಣ್ಯ ಆಲಿಸುವ ಹೃದಯವಂತಿಕೆಯು ಸರ್ಕಾರ ತೋರಬೇಕು. ಸರ್ಕಾರಿ ನೌಕರರು ಹೊಂದಿರುವ ಸೌಲಭ್ಯಗಳನ್ನು ಪಾಲಿಕೆ ನೌಕರರಿಗೆ ವಿಸ್ತರಿಸಬೇಕು. ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು. ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯವನ್ನು ಪಾಲಿಕೆ ನೌಕರರಿಗೆ ಅನ್ವಯಿಸಬೇಕು. ಆರೋಗ್ಯ ಸೌಲಭ್ಯದ ಜ್ಯೋತಿ, ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕೆಂದು ಸರ್ಕಾರವನ್ನು ಮಹಾನಗರ ಪಾಲಿಕೆ ಸದಸ್ಯರುಗಳು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರುಗಳಾದ ಮಡಿವಾಳಪ್ಪ ಕರಡಿ, ರಾಜು ಜಾದವ, ಮಹೇಶ ಒಡೆಯರ, ಆಸಿಫ್ ಶಾನವಾಲೆ, ಜವಾಹರ ಗೋಸಾಯಿ ಮುಂತಾದವರು ಉಪಸ್ಥಿತರಿದ್ದರು.