ಪ್ರಜಾಸ್ತ್ರ ಸುದ್ದಿ
ವಿಜಯಪುರು(Vijayapura): ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ಶನಿವಾರ ಕನ್ನಡ ಹಾಗೂ ಅರೆಬಿಕ್ ವಿಷಯ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 63 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿವೆ. ಕನ್ನಡ ಭಾಷೆಗೆ 29,437 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. 1,370 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಅರೆಬಿಕ್ ಭಾಷೆಗೆ 109 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 4 ವಿದ್ಯಾರ್ಥಿಗಳು ಗೈರಾಗಿದ್ದರು. ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲವೆಂದು ತಿಳಿದು ಬಂದಿದೆ.
ಪರೀಕ್ಷೆ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ, ವಿಜಯಪುರ ನಗರದ ಬಾಲಕರ ಹಾಗೂ ಬಾಲಕಿಯರ ಪದವಿಪೂರ್ವ ಕಾಲೇಜು ಮತ್ತು ಸಿಕ್ಯಾಬ್ ಮಹಿಳಾ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಪರೀಕ್ಷೆಗೆ ಸಂಬಂಧಿಸಿದಂತೆ ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಇದರ ಜೊತೆಗೆ ವೆಬ್ ಕಾಸ್ಟಿಂಗ್ ಕೇಂದ್ರಕ್ಕೂ ಭೇಟಿ ಕೊಟ್ಟು ಸೂಕ್ತ ರೀತಿಯಲ್ಲಿ ನಿಗಾವಹಿಸಲು ಸೂಚಿಸಿದರು.