Ad imageAd image

ವಿಜಯಪುರ: ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು.

Nagesh Talawar
ವಿಜಯಪುರ: ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕ್ರಾಂತಿವೀರ ಸಂಗೊಳ್ಳಿ(Sangolli Rayanna) ರಾಯಣ್ಣನ ಜನ್ಮದಿನವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು. ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಫೋಟೋಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ದೇಶಕ್ಕೆ ಸ್ವತಂತ್ರ ಸಿಕ್ಕ ಆಗಸ್ಟ್ 15 ರಾಯಣ್ಣನ ಜನ್ಮದಿನವಾಗಿದೆ. ಗಣರಾಜ್ಯೋತ್ಸವ ದಿನವಾದ ಜನವರಿ 26ರ ಹುತಾತ್ಮರಾದ ದಿನವಾಗಿದೆ.

ಈ ವೇಳೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ್, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ, ಸಂಘ, ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

WhatsApp Group Join Now
Telegram Group Join Now
Share This Article