Ad imageAd image

ವಿಜಯಪುರ: ಸರಣಿ ಅಪಘಾತ, ಸ್ಥಳದಲ್ಲೇ 6 ಜನರ ಸಾವು

Nagesh Talawar
ವಿಜಯಪುರ: ಸರಣಿ ಅಪಘಾತ, ಸ್ಥಳದಲ್ಲೇ 6 ಜನರ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಬಸ್, ಲಾರಿ ಹಾಗೂ ಕಾರು ನಡುವೆ ಸರಣಿ ಅಪಘಾತ ಸಂಭವಿಸಿ 6 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ನಡೆದಿದೆ. ಮನಗೂಳಿ ಹತ್ತಿರದ ಸೋಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹೀಂದ್ರಾ ಸ್ಕಾರ್ಪಿಯೋದಲ್ಲಿದ್ದ ತೆಲಂಗಾಣದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್, ಪತ್ನಿ ಪವಿತ್ರಾ, ಮಗಳು ಜೋಸ್ನಾ, ಕಾರು ಚಾಲಕ ಜಿಲ್ಲೆಯ ಹೊರ್ತಿಯ ವಿಕಾಸ ಮಕನಿ ಹಾಗೂ ವಿಆರ್ ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಮೃತ ದುರ್ದೈವಿಗಳು.

ಮೃತ ಭಾಸ್ಕರನ್ ಪುತ್ರ ಪ್ರವೀಣತೇಜ, ಲಾರಿ ಚಾಲಕ ಚನ್ನಬಸು ಮಾಳಿ ಗಾಯಗೊಂಡಿದ್ದಾರೆ. ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೋಲಾಪುರದತ್ತ ಹೊರಟಿದ್ದ ಸ್ಕಾರ್ಪಿಯೋ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಂದು ಮುಂಬೈನಿಂದ ಬಳ್ಳಾರಿಗೆ ಹೊರಟ್ಟಿದ್ದ ವಿಆರ್ ಎಲ್ ಬಸ್ ಹಾಗೂ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 6 ಜನರ ಪ್ರಾಣ ಹೋಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article