Ad imageAd image

ಮಾನವ ಸರಪಳಿ: ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಪ್ರಥಮ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ

Nagesh Talawar
ಮಾನವ ಸರಪಳಿ: ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಪ್ರಥಮ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ(Democracy)ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಯಶಸ್ವಿಯಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣಕ್ಕೆ ಮಾನವ ಸರಪಳಿ ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.

ವಿಜಯಪುರ ಜಿಲ್ಲೆಗೆ ನಾವೀನ್ಯತೆ ವಿಭಾಗದಲ್ಲಿ ಪ್ರಥಮ ಸ್ಥಾನ ಸಂದಿರುವ ಹಿನ್ನಲೆಯಲ್ಲಿ ನವೆಂಬರ್ 26 ರಂದು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಶಸ್ತಿ ಸ್ವೀಕರಿಸಿದರು. ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರನಿಂದ ಚಾಮರಾಜನಗರವರೆಗೆ ಮಾನವ ಸರಪಳಿ ನಿರ್ಮಾಣ ಹಾಗೂ ವಿಶಿಷ್ಟ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವರ್ಲ್ಡ್ ಆಫ್ ಬುಕ್ ರೆಕಾರ್ಡ್(World of Book Record) ಸೇರ್ಪಡೆಗೊಂಡಿದೆ.

WhatsApp Group Join Now
Telegram Group Join Now
Share This Article