ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನೋಂದಣಿ ಅವಧಿಯನ್ನು ಏಪ್ರಿಲ್ 25ರ ವರೆಗೆ ಹಾಗೂ ಖರೀದಿ ಅವಧಿಯನ್ನು ಮೇ 01ರವರೆಗೆ ವಿಸ್ತರಣೆ ಮಾಡಲಾಗಿದೆ. 2024-25ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ 7,550 ರೂಪಾಯಿ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಪ್ರತಿ ಕ್ವಿಂಟಾಲಿಗೆ ರೂಪಾಯಿ 450 ಸೇರಿದಂತೆ ರೂಪಾಯಿ 8000 ಪ್ರತಿ ಕ್ವಿಂಟಾಲಿಗೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಅಧ್ಯಕ್ಷರಾದ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.