ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬಿಜೆಪಿ ಪಕ್ಷದಿಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬುಧವಾರ ಸಂಜೆ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ನಗರ ಎಸ್ಟಿ ಮೋರ್ಚಾ ಕಾರ್ಯದರ್ಶಿ ಸಂತೋಷ ಟಗಾರ ರಾಜೀನಾಮೆ ನೀಡಿದ್ದರು. ಇಂದು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಂತೋಷ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಮೃತಪಟ್ಟಿದ್ದಾರೆ.
ಯತ್ನಾಳರನ್ನು ಉಚ್ಛಾಟನೆ ಮಾಡಿರಬಹುದು. ಆದರೆ, ಜನರ ಮನಸ್ಸಿನಿಂದ ಉಚ್ಛಾಟನೆ ಮಾಡುವುದಕ್ಕೆ ಆಗಲ್ಲ. ವೇಟ್ ಅಂಡ್ ಸಿ. ಬಿಜೆಪಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ನಿನ್ನೆ ಪೋಸ್ಟ್ ಮಾಡಿದ್ದ ಸಂತೋಷ್ ಇಂದು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಯತ್ನಾಳ್ ಬೆಂಬಲಿಸಿ ನಗರ ಘಟಕದ ಅಧ್ಯಕ್ಷ ಶಂಕರ ಹೂಗಾರ, ಕಾರ್ಯದರ್ಶಿ ಸಿದ್ದನಗೌಡ ಬಿರಾದಾರ, ಒಬಿಸಿ ಮೋರ್ಚಾ ಸ್ಥಾನಕ್ಕೆ ಭೀಮು ಮಾಶ್ಯಾಳ, ರೈತ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಚು ಬಿರಾದಾರ ರಾಜೀನಾಮೆ ನೀಡಿದ್ದಾರೆ.