Ad imageAd image

ಅಧ್ಯಕ್ಷನಾಗಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ: ವಿಜಯೇಂದ್ರ

Nagesh Talawar
ಅಧ್ಯಕ್ಷನಾಗಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ: ವಿಜಯೇಂದ್ರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ ವಿಜಯೇಂದ್ರರನ್ನು ಕೆಳಗೆ ಇಳಿಸಬೇಕು ಎಂದು ಶಾಸಕರಾದ ಯತ್ನಾಳ, ರಮೇಶ್ ಜಾರಕಿಹೊಳಿ ಟೀಂ ಬಹಿರಂಗವಾಗಿ ಹೇಳಿಕೆಗಳನ್ನು ಕೊಡುತ್ತಿದೆ. ಹೈಕಮಾಂಡ್ ಗಮನಕ್ಕೂ ತರುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ, ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದೇನೆ. ಮುಂದೆನೂ ಇರುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದರು.

ಯಡಿಯೂರಪ್ಪ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಅವರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದೆ. ಅವರ ವಿರುದ್ಧ ಮಾತನಾಡಿದಾಗ ಕಾರ್ಯಕರ್ತರಿಗೆ ನೋವಾಗುತ್ತೆ. ಪಕ್ಷದಲ್ಲಿನ ಎಲ್ಲ ಗೊಂದಲಗಳು ಆದಷ್ಟು ಬಗೆಹರಿಯುತ್ತವೆ ಎಂದರು. ಇನ್ನು ರಾಜ್ಯದಲ್ಲಿ ದರೋಡೆ, ಕೊಲೆ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಆದರೆ, ಸರ್ಕಾರ ತುಷ್ಟೀಕರಣ ಮಾಡುತ್ತಿದೆ. ಸಿದ್ದರಾಮಯ್ಯ ರಾಜಕೀಯ ಚಾಣಾಕ್ಷ. ಆದರೆ, ಯಾವುದೇ ಕಾರಣಕ್ಕೂ ಪೂರ್ಣಾವಧಿ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದರು.

WhatsApp Group Join Now
Telegram Group Join Now
Share This Article