ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆಯ ಉಪ ಚುನಾವಣೆಯಲ್ಲಿ ಎರಡೂ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಐತಿಹಾಸಿಕ ದಾಖಲೆ ಬರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಭಾನುವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.
ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಬಳಸಿಕೊಂಡಿದೆ. ಮತಬ್ಯಾಂಕ್ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಅಲ್ಪಸಂಖ್ಯಾತರನ್ನು ಮರೆತಿದೆ. ದೇವರಾಜ ಅರಸು ಅವರ ದಾಖಲೆ ಮುರಿದಿರುವುದಾಗಿ, 17 ಬಜೆಟ್ ಮಂಡನೆ ಮಾಡಿ ದಾಖಲೆ ನಿರ್ಮಿಸಿದ ಹುಮ್ಮಸ್ಸಿನಲ್ಲಿ ಸಿದ್ದರಾಮಯ್ಯನವರಿದ್ದಾರೆ. ಆದರೆ, ಇಂತಹ ಬಜೆಟ್ ನಿಂದ ರಾಜ್ ಅಭಿವೃದ್ಧಿ ಕಂಡಿಲ್ಲ. ಹಿಂದೂಗಳ ಜೊತೆಗೆ ಅಲ್ಪಸಂಖ್ಯಾತರು ಕೈಜೋಡಿಸಿದರೆ ದೇಶ ಅಭಿವೃದ್ಧಪಥದಲ್ಲಿ ಸಾಗಲಿದೆ ಎಂದರು.
ಪಂಚ ರಾಜ್ಯ ಚುನಾವಣೆ ಮುಗಿದು ಒಂದು ವಾರದಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಕಾಣಲಿದೆ. ಸದನದಲ್ಲಿ ಮುಖ್ಯಮಂತ್ರಿ ನೀಡಿದ ಉತ್ತರದಲ್ಲಿಯೇ ಇದರ ಸುಳಿವು ಇದೆ. ಐದು ರಾಜ್ಯಗ ಚುನಾವಣೆ ಬಳಿಕ ಹೈಕಮಾಂಡ್ ಗೆ ಸಿದ್ದರಾಮಯ್ಯ ಮಣಿಯಲಿದ್ದಾರೆ. ಮುಖ್ಯಮಂತ್ರಿಯಾಗಿ ಬಹಳ ದಿನ ಉಳಿಯುವುದಿಲ್ಲ ಅಂತಾ ಹೇಳಿದರು.




