ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ತಿರುಗಿ ಬಿದ್ದಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಬೇಕೆಂದು ತಮ್ಮದೆ ತಂಡ ಕಟ್ಟಿಕೊಂಡು ಹೋರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ, ವಿಜಯೇಂದ್ರನದ್ದು ಜೀನ್ಸ್ ಫ್ಯಾಂಟ್, ಟೀ ಶರ್ಟ್ ಹಾಕಿಕೊಂಡು ಓಡಾಡುವ ವಯಸ್ಸು. ರಾಜ್ಯಾಧ್ಯಕ್ಷ ನಿಭಾಯಿಸುವ ಸಾಮರ್ಥ್ಯವಿಲ್ಲ. ಮುಂದೆ ಒಳ್ಳೆಯ ಭವಿಷ್ಯವಿದೆ ಎಂದು ಹೇಳಿದ್ದಾರೆ.
ಬಿಜೆಪಿಯ ಶೇಕಡ 70ರಷ್ಟು ಶಾಸಕರು ನನ್ನ ಸ್ನೇಹಿತರಾಗಿದ್ದಾರೆ. ಬಹಿರಂಗವಾಗಿ ಮಾತನಾಡುತ್ತಿಲ್ಲ. ಹಿಂದೆ ಸರೆಯಿರಿ ಎಂದು ಅವರೆಲ್ಲ ಹೇಳಿದರೆ ನಾವು ಹಿಂದೆ ಸರಿಯುತ್ತೇವೆ. ಹಿಂದುಳಿದ ವರ್ಗದ ನಾಯಕರಿಗೆ ವಿಜಯೇಂದ್ರ ಬೆದರಿಕೆ ಹಾಕಿದ್ದಾರೆ. ಅವರ ಬೆನ್ನಿಗೆ ಇರುವವರು ಲಿಂಗಾಯತರು, ಒಕ್ಕಲಿಗರು ಅಲ್ಲ. ಬಹುತೇಕರು ಹಿಂದುಳಿದ ಸಮಾಜದ ನಾಯಕರು. ಯತ್ನಾಳ್, ನನ್ನನ್ನು ರಾಜ್ಯಾಧ್ಯಕ್ಷ ಮಾಡಬೇಡಿ. ಎಲ್ಲರನ್ನೂ ಸರಿಯಾಗಿ ತೆಗೆದುಕೊಂಡು ಹೋಗುವವರಿಗೆ ಕೊಡಿ. ಈಗ ವಿಜಯೇಂದ್ರ ಪದತ್ಯಾಗ ಮಾಡಲಿ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ.