ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯನವರು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಅನುದಾನವಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕರೆ ಹೇಳುತ್ತಿದ್ದಾರೆ. ಆದ್ರೆ, ಸಿಎಂ ಸ್ಥಾನ ಉಳಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರೆ ಅನುದಾನಕ್ಕಾಗಿ ಗೋಗರೆಯುತ್ತಿದ್ದಾರೆ. ಮನೆ ಕಟ್ಟಿಕೊಡಲು ಹಣವಿಲ್ಲ. ಗಂಗಾ ಕಲ್ಯಾಣ ಯೋಜನೆಗೆ ಹಣವಿಲ್ಲ. ಅನುಗ್ರಹ ಯೋಜನೆಗೆ ಅನುದಾನವಿಲ್ಲ. ಇತಿಹಾಸದಲ್ಲಿಯೇ ಇಂಥಾ ಕೆಟ್ಟ ಸರ್ಕಾರ ನೋಡಿಲ್ಲ ಎಂದರು.
ಅಹಿಂದ ವರ್ಗಗಳ ಪ್ರತಿಪಾದಕ ಎಂದು ಹೇಳಿಕೊಳ್ಳುತ್ತಾರೆ. ಆದ್ರೆ, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಗದ ಮೂಲಕ ಪಡೆದ ಸಾಲಗಳ ಬಡ್ಡಿ ಮನ್ನಾ ಮಾಡಲಾಗಿದೆ. ಇತರೆ ಸಮುದಾಯಗಳಿಗೆ ಈ ಅವಕಾಶವಿಲ್ಲ. ಸರ್ಕಾರದ ಮಟ್ಟದಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುತ್ತಿಲ್ಲ. ಇನ್ನೆರಡು ತಿಂಗಳಲ್ಲಿ ಈ ಸರ್ಕಾರಕ್ಕೆ 3 ವರ್ಷ ತುಂಬುತ್ತೆ. ಆದ್ರೆ, ರಾಜ್ಯ ಅಭಿವೃದ್ಧಿಯಾಗಿಲ್ಲ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು.




