Ad imageAd image

ವಿಜಯಪುರ: ಐಎಎಸ್, ಕೆಎಎಸ್ ಸಾಮಾನ್ಯ ಪರೀಕ್ಷೆ ಮುಗಿಯುವ ತನಕ ಇಲ್ಲಿ ನಿಷೇಧಿತ

ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ

Nagesh Talawar
ವಿಜಯಪುರ: ಐಎಎಸ್, ಕೆಎಎಸ್ ಸಾಮಾನ್ಯ ಪರೀಕ್ಷೆ ಮುಗಿಯುವ ತನಕ ಇಲ್ಲಿ ನಿಷೇಧಿತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಐಎಎಸ್(IAS) ಮತ್ತು ಕೆಎಎಸ್(KAS) ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯೂ ನಗರದ ಸಿಕ್ಯಾಬ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 6 ರಂದು ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 8.30ರಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ, ಇತರರು ಹಾಗೂ ಅಭ್ಯರ್ಥಿಗಳು ಆಧುನಿಕ ಎಲೆಕ್ಟ್ರಾನಿಕ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಮಾರ್ಕರ್, ವೈಟ್ ಫ್ಲೂಯಿಡ್, ವೈರ್ಲೆಸ್ ಸೆಟ್, ಪುಸ್ತಕ ಇತ್ಯಾದಿಗಳನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ ಗಳು, ಇಂಟರನೆಟ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

WhatsApp Group Join Now
Telegram Group Join Now
Share This Article