Ad imageAd image

ದೆಹಲಿ ಪಥಸಂಚಲನದಲ್ಲಿ ವಿಜಯಪುರ ಸ್ತಬ್ದಚಿತ್ರ

Nagesh Talawar
ದೆಹಲಿ ಪಥಸಂಚಲನದಲ್ಲಿ ವಿಜಯಪುರ ಸ್ತಬ್ದಚಿತ್ರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‍ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.

ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ.

ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ನೀಡಲಾಗಿರುವ ವಿಶೇಷ ಆದ್ಯತೆಯ ಮೂಲಕ ಯುವಶಕ್ತಿಗೆ ಉದ್ಯಮಶೀಲ ಅವಕಾಶಗಳನ್ನು ಒದಗಿಸಿ, ಭವಿಷ್ಯದ ಆರ್ಥಿಕತೆಗೆ ಭದ್ರ ಬುನಾದಿಯನ್ನು ಕರ್ನಾಟಕ ನಿರ್ಮಿಸುತ್ತಿದೆ. ಹೂಡಿಕೆ ಸ್ನೇಹಿ ನೀತಿಗಳ ಮೂಲಕ ಉತ್ಪಾದನಾ ವಲಯದಲ್ಲಿ ಗರಿಷ್ಠ ಬೆಳವಣಿಗೆಯನ್ನು ಸಾಧಿಸಿರುವ ಕರ್ನಾಟಕವು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಜೊತೆಗೆ, ಸಾರ್ಟ್ ಅಪ್ ಕ್ಯಾಪಿಟಲ್ ಆಫ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯವು ನವ ದೆಹಲಿಯಲ್ಲಿ ಪ್ರದರ್ಶಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮನಸೂರೆಗೊಳ್ಳಲಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Share This Article