Ad imageAd image

‘ಸಮಾಜ ಕಟ್ಟಲು ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ’

ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು

Nagesh Talawar
‘ಸಮಾಜ ಕಟ್ಟಲು ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ’
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಅವರು ಹೇಳಿದರು. ಮಂಗಳವಾರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ(Vishwakarma jayanti) ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜ ಕಟ್ಟಲು ವಿಶ್ವಕರ್ಮ ಸಮುದಾಯ ಶ್ರಮ ಅಗಾಧವಾಗಿದೆ. ಇಂತಹ ದಾರ್ಶನಿಕರ ಜಯಂತಿ ಆಚರಿಸುವ ಮೂಲಕ ಅವರ ಆದರ್ಶ ಹಾಗೂ ಶ್ರೇಷ್ಠತೆಗಳನ್ನು ಯುವಪೀಳಿಗೆ ಅನುಸರಿಸಬೇಕು ಎಂದರು.

ಪೂಜ್ಯ ಮಹೀಂದ್ರ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಹಾರೊಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ರಾವಸಾಬ ಬಡಿಗೇರ ವಿಶೇಷ ಉಪನ್ಯಾಸ ನೀಡಿದರು.  ಭಾರತಿ ಕುಂದನಗಾರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಮಗ ಗೆಣ್ಣುರು ಅವರು ಚಾಲನೆ ನೀಡಿದರು. ಎಚ್.ಮಮದಾಪೂರ ಅವರು ಕಾರ್ಯಕ್ರಮ ನಿರೂಪಿಸಿದರು. ಈ ವೇಳೆ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ,  ಗ್ರೇಡ್ 2 ತಹಶೀಲ್ದಾರ್ ಐ.ಎಚ್ ತುಂಬಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ದೇವೆಂದ್ರ ಮಿರೇಕರ್ ಸೇರಿದಂತೆ ಸಮುದಾಯದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article