ಪ್ರಜಾಸ್ತ್ರ ಸುದ್ದಿ
ರಾಂಚಿ(Ranchi): ಜಾರ್ಖಂಡ್ ವಿಧಾನಸಭೆಯ 81 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳು ಮತದಾನ ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದಲೇ ಜನರು ಮತ ಚಲಾಯಿಸುತ್ತಿದ್ದಾರೆ. 15 ಜಿಲ್ಲೆಗಳಲ್ಲಿ ಮತದಾನವಾಗುತ್ತಿದೆ. 683 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಾಜಿ ಸಿಎಂ ಚಂಪೈ ಸ್ಪರ್ಧಿಸಿದ್ದಾರೆ. 1.37 ಕೋಟಿ ಜನರು ವೋಟ್ ಚಲಾಯಿಸಲಿದ್ದಾರೆ. ನವೆಂಬರ್ 20ರಂದು 2ನೇ ಹಂತದ ಮತದಾನ ನಡೆಯಲಿದೆ.
ಇನ್ನು ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಸಹ ಇಂದೇ ನಡೆಯುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ್ ಗಾಂಧಿ ವಾದ್ರಾ ಮೊದಲ ಬಾರಿಗೆ ಚುನಾವಣಾ ರಾಜಕಾರಣಕ್ಕೆ ಇಳಿದಿದ್ದಾರೆ. ಎನ್ ಡಿಎ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಕಣದಲ್ಲಿದ್ದಾರೆ. ಯುಡಿಎಫ್, ಎಲ್ ಡಿಎಫ್ ಸೇರಿ ಇತರೆ ಪ್ರಾದೇಶಿ ಹಾಗೂ ಪಕ್ಷೇತರರು ಸೇರಿ 16 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ನಡೆಯುತ್ತಿದೆ.