ಪ್ರಜಾಸ್ತ್ರ ಸುದ್ದಿ
ಮಂಡ್ಯ(Mandaya): ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಸುಮಾರು 80 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಆದ್ದರಿಂದ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ.
ನದಿಪಾತ್ರದ ಎರಡು ಬದಿಯ ಜನರು, ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರು ಮುಂಜಾಗ್ರತ ಕ್ರಮವಾಗಿ ಎಚ್ಚರಿಕೆಯಿಂದ ಇರಲು ಹೇಳಲಾಗಿದೆ. ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಗಳಲ್ಲಿ ಇರಲು ತಿಳಿಸಲಾಗಿದೆ.