Ad imageAd image

ಒಳಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

ಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಇದರ

Nagesh Talawar
ಒಳಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ರಾಯಚೂರು(Raichur): ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸಾಮಾಜಿಕ, ಶೈಕ್ಷಣಿಕ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ರಾಯಚೂರಿಗೆ ಭೇಟಿ ನೀಡಿರುವ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದರು. ರಾಜ್ಯ ಮಟ್ಟದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ. ಜಿ.ಟಿ.ದೇವೇಗೌಡ ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಮೇಲೆ ಎಫ್ಐಆರ್ ಆಗಿದೆ. ಮೊದಲು ಅವರು ರಾಜೀನಾಮೆ ನೀಡಲಿ. ಜಮೀನು ಖರೀದಿ ಹಗರಣದಲ್ಲಿ ಅವರು ಈ ಹಿಂದೆ ಭಾಗಿಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.

WhatsApp Group Join Now
Telegram Group Join Now
Share This Article