ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ರಾಜ್ಯದಲ್ಲಿ ಮುಡಾ ಹಗರಣದ ಪ್ರಕರಣ ಬೆಳಕಿಗೆ ಬಂದಾಗಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಮುನ್ನೆಲೆಗೆ ಬರುತ್ತಿದೆ. ಒಂದು ಕಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇನ್ನೊಂದು ಆಂತರಿಕವಾಗಿ ಕಾಂಗ್ರೆಸ್ ನಲ್ಲಿಯೇ ಸಿಎಂ ಬದಲಾವಣೆಯ ಚರ್ಚೆ ನಡೆದಿದೆ ಎನ್ನುವ ಮಾತುಗಳು ಕೇಳಿ ಬರುತ್ತವೆ. ಆದರೆ, ಇದೆಲ್ಲವೂ ಸುಳ್ಳು ಎನ್ನುವುದು ಕೈ ನಾಯಕರ ಮಾತುಗಳು. ಇಂದು ಮೈಸೂರಿನಲ್ಲಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಸಿಎಂ ಕೆಳಗಿಳಿಸುವ ಬಗ್ಗೆ ಪಕ್ಷದಲ್ಲಿ ಯಾವತ್ತೂ ಮಾತನಾಡಿಲ್ಲ ಎಂದಿದ್ದಾರೆ.
ಬಿಜೆಪಿಯವರಿಗೆ ಸಿದ್ದರಾಮಯ್ಯನವರು ಕಂಡರೆ ಹೊಟ್ಟೆಕಿಚ್ಚು. ಹೀಗಾಗಿ ಅವರ ರಾಜೀನಾಮೆ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಹೇಳುತ್ತಾರೆ ಎನ್ನುವ ರೀತಿಯಲ್ಲಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ಬಳಿಕ ಸಿಎಂ ರೇಸಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಹೆಚ್.ಕೆ ಪಾಟೀಲ, ಎಂ.ಬಿ ಪಾಟೀಲ ಸೇರಿದಂತೆ ದೊಡ್ಡ ಲಿಸ್ಟ್ ಇದೆ. ಹೀಗಾಗಿ ಪದೆಪದೆ ಈ ವಿಚಾರ ಮುನ್ನೆಲೆಗೆ ಬರುತ್ತಿದೆ.