ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಂಗ್ರೆಸ್ ಸರ್ಕಾರ ಬೀಳಿಸಲು 50 ಶಾಸಕರಿಗೆ 50 ಕೋಟಿ ರೂಪಾಯಿಯ ಆಮಿಷವನ್ನು ಬಿಜೆಪಿಯವರು ನೀಡಿದ್ದರು. ಭ್ರಷ್ಟಾಚಾರ ಮಾಡಿಲ್ಲ ಅಂತಾರೆ. ಇದಕ್ಕೆ ದುಡ್ಡು ಎಲ್ಲಿಂದ ಬಂತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, 50 ಕೋಟಿ ರೂಪಾಯಿ ಆಮಿಷದ ಮೂಲ ಯಾವುದು ಎಂದು ಜನರ ಮುಂದೆ ಬಹಿರಂಗ ಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಬಾಲಿಶ ರಾಜಕೀಯ ಹೇಳಿಕೆಯಾಗುತ್ತೆ ಎಂದಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದಿರುವ ವಿಜಯೇಂದ್ರ, ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ. ಮುಖ್ಯಮಂತ್ರಿಯಂತಹ ಜವಾಬ್ದಾರಿಯ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆ ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ. ನಿಮ್ಮದೆ ಸರ್ಕಾರ, ನಿಮ್ಮದೆ ತನಿಖಾ ಸಂಸ್ಥೆಗಳಿವೆ. 50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದು ಬಹಿರಂಗ ಪಡಿಸಿ ಅಂತಾ ಹೇಳಿದರು.
ಮೈಸೂರಿನ ಟಿ.ನರಸೀಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನಾಯಕರಿಗೆ ಬಹುಮತ ಇದ್ಯಾ? ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಸರ್ಕಾರ ಕಿತ್ತೊಗೆಯಲು 50 ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ರು ಎಂದು ಹೇಳಿದ್ದರು. ಅದಕ್ಕೆ ಇಂದು ಇವರು ತಿರುಗೇಟು ನೀಡಿದರು.