ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್‌ನಲ್ಲಿ ವ್ಯಕ್ತಪಡಿಸಲಾಗಿದೆ. ಈ ಬಜೆಟ್‌ನಲ್ಲಿ ಯುವಜನರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಉದ್ಯೋಗ(Job) ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ 4 ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸುವ ಭರವಸೆಯನ್ನು ಬಜೆಟ್‌ನಲ್ಲಿ ನೀಡಲಾಗಿದೆ. ಶಿಕ್ಷಣ, ಆರೋಗ್ಯ(Health), ವಸತಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆಯನ್ನು ವಿತ್ತ ಸಚಿವರು ನೀಡಿದ್ದಾರೆ. – ಆರ್.ಎಸ್ ಪಾಟೀಲ್ ಕುಚುಬಾಳ, ಬಿಜೆಪಿ ಜಿಲ್ಲಾಧ್ಯಕ್ಷರು
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9 ಅಂಶಗಳಿಗೆ ಬಜೆಟ್‌ನಲ್ಲಿ(Budget) ಹೆಚ್ಚಿನ ಆದ್ಯತೆ ನೀಡಿದ್ದು, ಕೃಷಿ(Agriculture) ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲಗಳ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆ ಆವಿಷ್ಕಾರ ಸಂಶೋಧನೆ ಅಭಿವೃದ್ಧಿ, ಮುಂದಿನ ಪೀಳಿಗೆಗೆ ಆದ್ಯತೆ, ಎಂಎಸ್‌ಎಪಿಗಳಿಗೆ ಒತ್ತು ಸೇರಿದಂತೆ 9 ವಲಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. – ಅರುಣ ಶಾಪೂರ, ಮಾಜಿ ಎಂಎಲ್ಸಿ
ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ಕೈಗಾರಿಕೆಗಳ(Industry) ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಘೋಷಣೆಯನ್ನು ಬಜೆಟ್‌ನಲ್ಲಿ ಮಾಡಲಾಗಿದೆ. ಇದರಲ್ಲಿ ರಾಜ್ಯಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ನೀಡುವ ಯೋಜನೆಯನ್ನು ಪ್ರಕಟಿಸಿದ್ದಾರೆ. ನಗರಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವ ಬಜೆಟ್‌ನಲ್ಲಿ ಭೂ ದಾಖಲೆಗಳ ಡಿಜಟಲೀಕರಣ ಘೋಷಣೆಯನ್ನು ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿಗೂ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ರೈತರ ಸಾಲ ಸೌಲಭ್ಯಕ್ಕೂ ಆದ್ಯತೆ ನೀಡಲಾಗಿದೆ. – ಶಿವರುದ್ರ ಬಾಗಲಕೋಟ, ಮಹಾನಗರ ಪಾಲಿಕೆಯ ಸದಸ್ಯರು
ದೇಶದ 130 ಕೋಟಿ ಜನರ ಅಭಿವೃದ್ಧಿಯೆ ಮೂಲ ಮಂತ್ರ ವಾಗಿಟ್ಟುಕೊಂಡು, ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದೆ. ದೇಶದ ಅಭಿವೃದ್ಧಿ ಪೂರಕ ಬಜೆಟ್ ನ್ನು ಸ್ವಾಗತಿಸುತ್ತೇನೆ. ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು. – ವಿಜಯ ಜೋಶಿ, ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕರು
ಬಡವರು, ಮಹಿಳೆಯರು, ಯುವಕರು ಹಾಗೂ ನಾಡಿನ ಅನ್ನದಾತನ ಸಬಲೀಕರಣದ ಜತೆಗೆ ವಿಕಸಿತ ಭಾರತಕ್ಕೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ. – ವಿವೇಕಾನಂದ ಡಬ್ಬಿ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷರು
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಈ ಬಜೆಟ್‌ನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಯ ಮಂತ್ರವನ್ನು ಜಪಿಸಲಾಗಿದೆ. ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಪೂರಕವಾದ ಅಂಶಗಳಿಗೆ ಒತ್ತು ನೀಡಲಾಗಿದೆ. – ಚಿದಾನಂದ ಚಲವಾದಿ, ಬಿಜೆಪಿ ಮುಖಂಡರು