ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ತಮಿಳು ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ ಪಕ್ಷಕ್ಕೆ ಚುನಾವಣೆ ಆಯೋಗ ಸೀಟಿ ಚಿಹ್ನೆಯನ್ನು ನೀಡಿದೆ. ಇರ್ನೋವ ಹಿರಿಯ ನಟ ಕಮಲ್ ಹಾಸನ್ ಅವರ ಮಕ್ಕಳ ನಿಧಿ ಮಯಂ ಪಕ್ಷಕ್ಕೆ ಟಾರ್ಚ್ ಚಿಹ್ನೆಯನ್ನು ನೀಡಿದೆ. ಈ ಬಗ್ಗೆ ಚುನಾವಣಾ ಆಯೋಗ ಹೇಳಿಕೆ ಬಿಡುಗಡೆ ಮಾಡಿದೆ.
ತಮಿಳುನಾಡು ವಿಧಾನಸಭೆ 234 ಸ್ಥಾನಗಳನ್ನು ಹೊಂದಿದೆ. ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಹೊಸ ಪಕ್ಷಗಳಿಗೆ ಚಿಹ್ನೆಗಳನ್ನು ನೀಡಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.




