ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಳೆದ ಹಲವು ದಿನಗಳಿಂದ ಮಾತುಗಳು ಕೇಳಿ ಬರುತ್ತಲೇ ಇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಜೊತೆಗೆ ಮಾತನಾಡಿದ್ದು, ಸಚಿವ ಸಂಪುಟ ಪುನರ್ ರಚನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.
ಯಾರಿಗೆಲ್ಲ ಗೇಟ್ ಪಾಸ್?: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ, ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ, ತೋಟಗಾರಿಕೆ ಮತ್ತು ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಪೌರಾಡಳಿತ ಸಚಿವ ರಹೀಂ ಖಾನ್, ಸಮಾಜ ಕಲ್ಯಾಣ ಖಾತೆ ಸಚಿವ ಹೆಚ್.ಸಿ ಮಹಾದೇವಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜ್, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ.
ಯಾರಿಗೆಲ್ಲ ಮಂತ್ರಿಗಿರಿ?: ಬಿ.ಕೆ ಹರಿಪ್ರಸಾದ್, ಮಾಗಡಿ ಬಾಲಕೃಷ್ಣ, ರೂಪಕಲಾ ಶಶಿಧರ್, ಆರ್.ವಿ ದೇಶಪಾಂಡೆ, ತನ್ವೀರ್ ಸೇಠ್, ಎಂ.ಕೃಷ್ಣಪ್ಪ, ಯು.ಟಿ ಖಾದರ್, ಗೋಪಾಲಕೃಷ್ಣ ಬೇಳೂರು, ಸಲೀಂ ಅಹ್ಮದ್, ಕೆ.ಎನ್ ರಾಜಣ್ಣ, ರಿಜ್ವಾನ್ ಅರ್ಷದ್, ಎನ್.ಎ ಹ್ಯಾರಿಸ್. ಇವರಿಗೆ ಸಚಿವ ಸ್ಥಾನ ಎಂದು ಹೇಳಲಾಗುತ್ತಿದೆ. ಶೀಘ್ರದಲ್ಲಿ ಈ ಬಗ್ಗೆ ಅಧಿಕೃತ ಪಟ್ಟಿ ಹೊರಬೀಳಬೇಕಿದೆ.




