ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ನೇಮಿಸಿದ ಆಯೋಗದಂತೆ ಇದೀಗ ಸಮೀಕ್ಷೆ ನಡೆಯುತ್ತಿದ್ದು, ರಾಜ್ಯದಲ್ಲಿನ ಪ್ರತಿಯೊಂದು ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ಇದನ್ನು ಜಾತಿಗಣತಿ ಎಂದು ಹಬ್ಬಿಸಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ.
ರಾಜಕೀಯ ಮುಖಂಡರು ಸೇರಿದಂತೆ ಅನೇಕರು ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯನ್ನು ಜಾತಿ ಸಮೀಕ್ಷೆ ಎನ್ನುವ ಮೂಲಕ ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿದೆ. ಅನೇಕರಲ್ಲಿ ಮತ್ತಷ್ಟು ಗೊಂದಲ ಮೂಡಿಸಿದೆ. 60 ವರ್ಷಗಳ ಕಾಲಂನಲ್ಲಿ ಜಾತಿಯ ಕಾಲಂ ಇದೆ ಎಂದು ಸಮೀಕ್ಷೆ ನಡೆಸುತ್ತಿರುವ ಸಿಬ್ಬಂದಿ ಹೇಳುತ್ತಿದ್ದಾರೆ. ಜಾತಿಗಣತಿ ಮುಂದೆ ನಡೆಯುತ್ತದೆ. ಇದು ಜಾತಿಗಣತಿ ಅಲ್ಲವೆಂದು ಹೇಳುತ್ತಿದ್ದಾರೆ. ಆದರೆ, ಇದೇ ಜಾತಿಗಣತಿ ಎಂದು ಕೆಲವರು ಹೇಳುತ್ತಿದ್ದು, ಸಾರ್ವಜನಿರಲ್ಲಿ ಅನುಮಾನಕ್ಕೆ ಕಾರಣವಾಗಿದೆ.