ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಭಾರತ ಹಾಗೂ ಪಾಕಿಸ್ತಾನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಿದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೆಪದೆ ಹೇಳಿಕೆ ನೀಡುತ್ತಿದ್ದಾರೆ. ಭಯೋತ್ಪಾದಕ ದೇಶ ಪಾಕಿಸ್ತಾನಕ್ಕೂ ಭಾರತಕ್ಕೂ ಹೋಲಿಕೆ ಮಾಡಿ ಹಗುರವಾಗಿ ಮಾತನಾಡುತ್ತಿದ್ದಾರೆ. ಇಷ್ಟಾದರೂ ಪ್ರಧಾನಿ ಮೋದಿ ಮೌನ ವಹಿಸಿದ್ದು ಯಾಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಭಾರತದ ವಿದೇಶಾಂಗ ನೀತಿಯನ್ನು ಟ್ರಂಪ್ ಯಾಕೆ ಹೇಳಿಕೆ ನೀಡಬೇಕು. ಪ್ರತಿ ಸಲ ಹಗುರವಾಗಿ ಮಾತನಾಡುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ಸರ್ವಪಕ್ಷ ಸಭೆ ಕರೆಯಬೇಕು. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ದೇಶದ ಜನರಿಗೆ ವಿಷಯ ತಿಳಿಸಬೇಕು. ಪಹಲ್ಗಾಮ್ ದಾಳಿ ನಡೆದಿದ್ದು ಏಪ್ರಿಲ್ 22ರಂದು. ದೇಶದ ಸೈನಿಕರಿಗೆ ಧೈರ್ಯ ತುಂಬುವ ಬದಲು ಬಿಹಾರ ಚುನಾವಣೆಯಲ್ಲಿ ಪ್ರತ್ಯಕ್ಷರಾಗಿದ್ದರು ಎಂದು ಕಿಡಿ ಕಾರಿದರು.