ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆ, ಉಪ ಕುಲಪತಿ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರಿಂದ ಬೇಸತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಮಹಾಲಕ್ಷ್ಮಿ ಲೇಔಟ್ ನಿವಾಸಿ ಲಾರಿ ಮಾಲೀಕ ಸ್ವಾಮಿ(45) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿಯ ಅಕ್ರಮ ಸಂಬಂಧ ಇದಕ್ಕೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಮಾರು 18 ವರ್ಷಗಳ ಹಿಂದೆ ಪವಿತ್ರಾಳನ್ನು ಮದುವೆಯಾಗಿದ್ದಾನೆ. ಪಿಯುಸಿವರೆಗೂ ಓದಿದ ಪತ್ನಿಯನ್ನು ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದ. ಗುತ್ತಿಗೆ ಆಧಾರದ ಮೇಲೆ ಎರಡು ವರ್ಷಗಳ ಹಿಂದೆ ಪವಿತ್ರಾ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲಸಕ್ಕೆ ಸೇರಿದ್ದಾಳೆ. ಅಲ್ಲಿ ವಿವಿ ರಿಜಿಸ್ಟರ್ ಮೈಲಾರಪ್ಪ ಎಂಬುವರೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳಂತೆ. ಈ ಬಗ್ಗೆ ಆತನ ಪತ್ನಿ ಇವರ ಮನೆಗೆ ಬಂದು ಬುದ್ದಿ ಹೇಳಿ ಹೋಗಿದ್ದಾರಂತೆ. ಆದರೂ ಅದೇ ಚಾಳಿ ಮುಂದುವರೆಸಿದ್ದರಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನಂತೆ.