ಪ್ರಜಾಸ್ತ್ರ ಸುದ್ದಿ
ಕುಣಿಗಲ್(Kunigal): ಮಹಿಳೆ ಮೇಲೆ ಹಲ್ಲೆ ಮಾಡಿ 60 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನ ಮಾಡಿರುವ ಘಟನೆ ಭಾನುವಾರ ಬೆಳಗಿನ ಜಾವ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ. ರಾಡ್ ನಿಂದ ರಕ್ಮುಣಿ ಎನ್ನುವ ಮಹಿಳೆ ಮೇಲೆ ಕಳ್ಳ ಹಲ್ಲೆ ಮಾಡಿ ಮಾಂಗಲ್ಯಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ರುಕ್ಮುಣಿ ಪತಿ ಬೆಳಗ್ಗೆ ಹಾಲನ್ನು ಡೇರಿಗೆ ಹಾಕಲು ಹೋಗಿದ್ದಾರೆ. ಮನೆ ಮುಂದೆ ಪಾತ್ರೆ ತೊಳೆದು ಆಕೆ ಒಳಗೆ ಹೋಗುತ್ತಿದ್ದಂತೆ ಮನೆಯೊಳಗೆ ನುಗ್ಗಿದ ಕಳ್ಳ ಆಕೆಯ ಮೇಲೆ ರಾಡ್ ನಿಂದ ಹಲ್ಲೆ ಮಾಡಿ ಮಾಂಗಲ್ಯಸರ ಕಿತ್ತುಕೊಂಡು ಹೋಗಿದ್ದಾನೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.