ಪ್ರಜಾಸ್ತ್ರ ಸುದ್ದಿ
ಆನೇಕಲ್(Anekal): ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಬಿಲ್ವಾರದಹಳ್ಳಿಯ ಮೂಲದ ಮಹಿಳೆ ರುಕ್ಸಾನಾ(23) ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಸುಮಾರು 10 ಲಕ್ಷ ಮೌಲ್ಯದ 9 ಕೆಜಿ 850 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ವೇಳೆ ಪರಾರಿಯಾದ ಇನ್ನಿಬ್ಬರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಬನ್ನೇರುಘಟ್ಟ ಠಾಣೆ ಪಿಎಸ್ಐ ಕೃಷ್ಣಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪೊಲೀಸರು ಬರುತ್ತಿದ್ದಂತೆ ಮೂವರು ಓಡಿ ಹೋಗಿದ್ದಾರೆ. ಅವರನ್ನು ಬೆನ್ನು ಹತ್ತಿದಾಗ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಇಬ್ಬರು ತಪ್ಪಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಈ ಒಂದು ದಾಳಿ ನಡೆಸಲಾಗಿದೆ.