ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ನಾಲ್ವರು ಮಕ್ಕಳೊಂದಿಗೆ ಮಹಿಳೆಯೊಬ್ಬಳು ಕಾಲುವೆಗೆ ಜಿಗಿದ ಘಟನೆ ಸೋಮವಾರ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ಕೋಲ್ಹಾರ ತಾಲೂಕಿನ ತೆಲಗಿ ಗ್ರಾಮದ ಮಹಿಳೆ ಭಾಗ್ಯ ಎಂಬಾಕೆ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಹಿಳೆಯನ್ನು ರಕ್ಷಿಸಲಾಗಿದೆ. ದುರಾದೃಷ್ಟವಶಾತ್ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ.
ತನು ನಿಂಗರಾಜ ಭಜಂತ್ರಿ(05), ರಕ್ಷಾ(03) ಹಾಗೂ ಅವಳಿ ಮಕ್ಕಳಾದ ಹಸೇನ-ಹುಸೇನ(13) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಮಕ್ಕಳೊಂದಿಗೆ ಕಾಲುವೆಗೆ ಜಿಗಿದಿದ್ದಾಳೆ ಎಂದು ಹೇಳಲಾಗುತ್ತಿದೆ. ಮೀನುಗಾರರು ಭಾಗ್ಯಗಳನ್ನು ರಕ್ಷಿಸಿದ್ದಾರೆ. ಏನೂ ಅರಿಯದ ಪುಟ್ಟ ಮಕ್ಕಳು ಮೃತಪಟ್ಟಿದ್ದು, ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.