ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅನೈತಿಕ ಸಂಬಂಧದ ಶಂಕೆಯ ಹಿನ್ನಲೆಯಲ್ಲಿ ಮಹಿಳೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹೊಂಗಸಂದ್ರ ನಿವಾಸಿ ಪ್ರಮೋದಾ(37) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾಳೆ.
ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದ ಪ್ರಮೋದಾಗೆ ಸುರೇಶ್ ಎಂಬುವರೊಂದಿಗೆ ಮದುವೆಯಾಗಿದೆ. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ಪ್ರಮೋದಾ ಬೇರೊಬ್ಬನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು ಅನ್ನೋ ಶಂಕೆ ಇದ್ದು, ಇದೆ ಕಾರಣಕ್ಕೆ ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಗೆ ನುಗ್ಗಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರಂತೆ. ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




