Ad imageAd image

ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು: ಜಿಲ್ಲಾಧಿಕಾರಿ ಡಾ.ಆನಂದ.ಕೆ

Nagesh Talawar
ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು: ಜಿಲ್ಲಾಧಿಕಾರಿ ಡಾ.ಆನಂದ.ಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮಹಿಳೆಯರು ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘಗಳಲ್ಲಿ ಕ್ರಿಯಾಶೀಲರಾಗಿ ಆರ್ಥಿಕ ಸಬಲೀಕರಣ ಹೊಂದಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ, ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಅನೇಕ ಯೋಜನೆಗಳ ಅನುಷ್ಟಾನದ ಮೂಲಕ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಬಲರನ್ನಾಗಿಸುವ ಮೂಲಕ ಅವರನ್ನು ಸಬಲೀಕರಣಗೊಳಿಸಲಾಗುತ್ತಿದೆ. ಮಹಿಳೆಯರು ಇಂದು ಎಲ್ಲ ರಂಗಗಳಲ್ಲೂ ದಾಪುಗಾಲನ್ನಿಟ್ಟಿರುವುದು ಸಂತಸದ ಸಂಗತಿ. ಆದರೆ ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ, ವರದಕ್ಷಿಣೆ, ಪ್ರಸವ ಪೂರ್ವ ಲಿಂಗ ಪತ್ತೆ ಹಾಗೂ ಹತ್ಯೆ, ಕೌಟುಂಬಿಕ ಹಿಂಸೆಯಂತಹ ಸಮಸ್ಯೆಗಳನ್ನು ತೊಡೆದು ಹಾಕಲು ಸಾಕಷ್ಟು ಕಾಯ್ದೆ ಕಾನೂನು ಜಾರಿಯಲ್ಲಿದ್ದು, ಸಂಬಂಧಿಸಿದ ಇಲಾಖೆಗಳು ಈ ನಿಟ್ಟಿನಲ್ಲಿ ಕೈ ಜೋಡಿಸುವ ಮೂಲಕ ಈ ಪಿಡುಗುಗಳ ನಿರ್ಮೂಲನೆ ಹಾಗೂ ಕಡಿವಾಣಕ್ಕೆ ಕಟಿಬದ್ಧರಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದೇ ವೇಳೆ ಬಾಲ್ಯ ವಿವಾಹ ತಡೆಗಟ್ಟುವಂತಹ ಸಾಮಾಜಿಕ ಸೇವೆ, ಮಕ್ಕಳ ಹಕ್ಕುಗಳ ರಕ್ಷಣೆ ಸೇರಿದಂತೆ ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿರುವ ಮಹಿಳಾ ಮೇಲ್ವಿಚಾರಕರು, ಇಲಾಖೆಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಗ್ರಾಮೀಣ ಭಾಗದಲ್ಲಿ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾರ್ಯ ನಿರ್ವಹಿಸಿರುವ ವಿವಿಧ ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಸಹ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತರು ಹಾಗೂ ಸಹಾಯಕಿರು ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article