ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಮೊದಲು ಮಹಿಳೆಯರ ಸೀಟುಗಳಲ್ಲಿ ಪುರುಷರ ಕುಳಿತುಕೊಳ್ಳುವಂತಿಲ್ಲ ಎಂದು ಹೇಳಲಾಗುತ್ತಿತ್ತು. ಈಗ ಪುರುಷರ ಸೀಟುಗಳಲ್ಲಿ ಮಹಿಳೆಯರು ಕುಳಿತುಕೊಳ್ಳುವಂತಿಲ್ಲವೆಂದು ಹೇಳಲಾಗುತ್ತಿದೆ. ಹೌದು, ಶಕ್ತಿ ಯೋಜನೆ ಜಾರಿಯಾದ ಮೇಲೆ ಮಹಿಳೆಯರು ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಪುರುಷರಿಗೆ ಕುಳಿತುಕೊಳ್ಳಲು ಸೀಟು ಸಿಗುತ್ತಿಲ್ಲ. ಈ ಬಗ್ಗೆ ವಿಷ್ಣುವರ್ಧನ್.ಎಸ್ ಎಂಬುವರು ಸಾರಿಗೆ ಇಲಾಖೆಯ ಕೇಂದ್ರ ಕಚೇರಿಗೆ ದೂರು ಸಲ್ಲಿಸಿದ್ದರು. ಇದೀಗ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪುರುಷರ ಸೀಟುಗಳಲ್ಲಿ ಪುರುಷರೆ ಕುಳಿತುಕೊಳ್ಳುವಂತೆ ನೋಡಿಕೊಳ್ಳಲು ಕಂಡಕ್ಟರ್ ಹಾಗೂ ಸಿಬ್ಬಂದಿಗೆ ಆದೇಶದ ಮೂಲಕ ಸೂಚಿಸಿದ್ದಾರೆ. ಉಚಿತ ಬಸ್ ಪ್ರಯಾಣದಿಂದಾಗಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಪುರುಷರಿಗೆ ಕುಳಿತುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಕಷ್ಟು ಬಾರಿ ಜಗಳಗಳು ಆಗುತ್ತಿವೆ. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪುರುಷರ ಸೀಟುಗಳಲ್ಲಿ ಪುರುಷರೆ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಕೆಎಸ್ಆರ್ ಟಿಸಿ ಸೂಚಿಸಿದೆ.