ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸಿಲಿಕಾನ್ ಸಿಟಿಯಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎಸ್.ಜಿ ಪಾಳ್ಯದಲ್ಲಿ ನಡೆದಿದೆ. ಶಿಲ್ಪಾ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಪತಿ ಹಾಗೂ ಆತನ ಕುಟುಂಬಸ್ಥರು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾರೆ ಎಂದು ಮೃತ ಶಿಲ್ಪಾ ಮನೆಯವರು ಆರೋಪಿಸಿದ್ದಾರೆ. ಈ ಸಂಬಂಧ ಪತಿ ಪ್ರವೀಣನನ್ನು ಬಂಧಿಸಲಾಗಿದೆ.
ಪ್ರವೀಣ್ ಹಾಗೂ ಶಿಲ್ಪಾ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದಾರೆ. ಈಗ ಏಕಾಏಕಿ ಶಿಲ್ಪಾ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಇದಕ್ಕೆ ಪತಿ ಮತ್ತು ಅವನ ಮನೆಯವರು ಕಾರಣವೆಂದು ಪೊಲೀಸ್ ದೂರು ನೀಡಲಾಗಿದೆ. ಸ್ಥಳಕ್ಕೆ ಎಸ್.ಜಿ ಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.