Ad imageAd image

ಮಹಿಳಾ ವಿವಿ ಘಟಿಕೋತ್ಸವ: ನಟಿ ತಾರಾ, ಚಿಂತಕಿ ಮೀನಾಕ್ಷಿ ಬಾಳಿಗೆ ಗೌರವ ಡಾಕ್ಟರೇಟ್

Nagesh Talawar
ಮಹಿಳಾ ವಿವಿ ಘಟಿಕೋತ್ಸವ: ನಟಿ ತಾರಾ, ಚಿಂತಕಿ ಮೀನಾಕ್ಷಿ ಬಾಳಿಗೆ ಗೌರವ ಡಾಕ್ಟರೇಟ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಮೂವರು ಮಹಿಳಾ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಬಿ.ಕೆ.ತುಳಸಿಮಾಲ ಹೇಳಿದರು. ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಯ ಜ್ಞಾನಶಕ್ತಿ ಕ್ಯಾಂಪಸ್‌ನ ಸಿಂಡಿಕೇಟ್ ಸಭಾಂಗಣದಲ್ಲಿ ಜನವರಿ 9ರಂದು 16ನೇ ಘಟಿಕೋತ್ಸವ ನಡೆಯಲಿದೆ. ವಿಶ್ವವಿದ್ಯಾಲಯದ ವಾಡಿಕೆಯಂತೆ ಕಲಾಕ್ಷೇತ್ರಕ್ಕೆ ಗಣನೀಯವಾದ ಕೊಡುಗೆಯನ್ನು ನೀಡಿದ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗೊಟಗೋಡಿಯ ರಾಕ್ ಗಾರ್ಡನ್ ಕಲಾಕೃತಿಗಳನ್ನು ತಯಾರಿಸಿದಂತಹ ವೇದರಾಣಿ ದಾಸನೂರು, ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದಂತಹ ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮೀನಾಕ್ಷಿ ಬಾಳಿ ಹಾಗೂ ಕನ್ನಡ ಚಿತ್ರರಂಗ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ಚಲನಚಿತ್ರ ನಟಿ ತಾರಾ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದು ಎಂದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು. ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. 63 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. ಒಟ್ಟು 13,461 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿರುತ್ತಾರೆ. 34 ವಿದ್ಯಾರ್ಥಿನಿಯರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುವುದು. ವಿವಿಯ ಒಟ್ಟು 12,350 ವಿದ್ಯಾರ್ಥಿನಿಯರಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗುವುದು. ಇದರಲ್ಲಿ 5,387 ಬಿ.ಎ, 36 ಬಿಎಸ್ ಡಬ್ಲೂ, 1,663 ಬಿ.ಇಎಡ್, 15 ಬಿಪಿಇಎಡ್, 3,536 ಬಿ.ಕಾಂ, 122 ಬಿಬಿಎ, 1,413 ಬಿ.ಎಸ್.ಸಿ, 115 ಬಿ.ಸಿ.ಎ, 63 ಬಿ.ಎಫ್.ಟಿ ಹಾಗೂ 5 ವಿದ್ಯಾರ್ಥಿನಿಯರು ಬಿಎಫ್ ಎಡಿ ಸ್ನಾತಕ ಪದವಿ ಪಡೆದಿದ್ದಾರೆ. ಅಕ್ಕ ಟಿವಿ ಯೂಟ್ಯೂಬ್ ನ್ಯೂಸ್ ಚಾನೆಲ್ ಲಿಂಕ್ https://www.youtube.com/live/QXB5kGfDENQ?si=XmnkyGro172BnQmt ಮೂಲಕ  ಘಟಿಕೋತ್ಸವದ ಕಾರ್ಯಕ್ರಮವನ್ನು ವಿಕ್ಷೀಸಬಹುದಾಗಿದೆ ಎಂದರು.

ಈ ವೇಳೆ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪಲ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಘಟಿಕೋತ್ಸವ ಸಂಯೋಜನಾಧಿಕಾರಿ ಪ್ರೊ.ಸಕ್ಲಾಲ್ ಹೂವಣ್ಣ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ ಹಾಗೂ ಸಂಯೋಜಕಿ ಡಾ.ತಹಮೀನಾ ಕೋಲಾರ, ಐಸಿಟಿ ಸಂಯೋಜಕ ಸಂದೀಪ್ ನಾಯಕ್ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article