ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಬಿಜೆಪಿಯಲ್ಲಿನ(BJP) ಜಗಳ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ತೊಡೆ ತಟ್ಟಿರುವ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ಬಣದಿಂದ ಶುಕ್ರವಾರ ಸಭೆ ನಡೆಸಲಾಗಿದೆ. ಸದಾಶಿವನಗರದಲ್ಲಿರುವ ಮಾಜಿ ಸಚಿವ ಕುಮಾರ ಬಂಗಾರಪ್ಪನವರ ಮನೆಯಲ್ಲಿ ಸಭೆ ನಡೆಸಿ, ರಾಜ್ಯಾಧ್ಯಕ್ಷ(State President) ಸ್ಥಾನದ ಚುನಾವಣೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ನಡೆಸಲಾಗಿದೆ. ದೆಹಲಿ ನಾಯಕರಿಗೆ ಇಲ್ಲಿನ ಪರಿಸ್ಥಿತಿ ಬಗ್ಗೆ ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ.
ಈ ವೇಳೆ ಮಾತನಾಡಿದ ಯತ್ನಾಳ, ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ. ಅಧ್ಯಕ್ಷರು ಆಗಬೇಕು ಎನ್ನುವ ಕಾರಣಕ್ಕೆ ಮಾಡಲಾಗಿದೆ. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದೊಂದು ಯುದ್ಧ. ಹಿಂದೆ ಸರಿಯೋ ಮಾತಿಲ್ಲ. ರಾಜ್ಯಾಧ್ಯಕ್ಷ ಚುನಾವಣೆ(Election) ಬಂದರೆ ಅಭ್ಯರ್ಥಿ ಕುರಿತು ಇನ್ನು ಎರಡು ದಿನ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಈ ಕುರಿತು ದೆಹಲಿಯಲ್ಲಿಯೂ ಸಭೆ ನಡೆಸುತ್ತೇವೆ ಎಂದರು. ಒಟ್ಟಿನಲ್ಲಿ ವಿಜಯೇಂದ್ರ ವಿರುದ್ಧದ ಪಡೆ ದಿನದಿಂದ ದಿನಕ್ಕೆ ಹೊಸ ಹೊಸ ದಾಳ ಉರುಳಿಸುತ್ತಿದೆ.