ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬುಧವಾರ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ಹೈಕಮಾಂಡ್ ಆದೇಶಿಸಿದೆ. ಇದರಿಂದ ಯತ್ನಾಳ್ ಬೆಂಬಲಿಗರು, ಹಿಂದೂಪರ ಕೆಲ ಸಂಘಟನೆಗಳು ಬಿಜೆಪಿ ವಿರುದ್ಧ ಕಿಡಿ ಕಾರುತ್ತಿದ್ದಾರೆ. ವಿಜಯಪುರ ನಗರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಹೂಗಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇದೇ ರೀತಿ ರಾಜ್ಯದ ವಿವಿಧ ಭಾಗಗಳಲ್ಲಿ ಸ್ಥಳೀಯವಾಗಿ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ. ಹಿಂದೂಗಳ ಪರವಾಗಿದ್ದು ಘರ್ಜಿಸುತ್ತಿದ್ದ ಯತ್ನಾಳ್ ಅವರನ್ನು ಉಚ್ಛಾಟನೆ ಮೂಲಕ ಬಿಜೆಪಿ ಮತ್ತಷ್ಟು ಖಾಲಿಯಾಗಿದೆ. ಅಪ್ಪ, ಮಗನಿಂದಾಗಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಕಂಟಕ ಶುರುವಾಗಲಿದೆ ಎಂದು ಕಿಡಿ ಕಾರುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ.