ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಕೊಡದೆ ಯಾವುದೇ ಕೆಲಸ ಆಗಲ್ಲ. ಈ ಬಗ್ಗೆ ಸರ್ಕಾರದ ಶಾಸಕರೆ ಹೇಳುತ್ತಿದ್ದಾರೆ. ಬಡವರಿಂದಲೂ ಹಣ ಪಡೆದು ಮನೆಗಳನ್ನು ನೀಡುವ ದುಸ್ಥಿತಿ ಕಾಂಗ್ರೆಸ್ ಗೆ ಬಂದಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಬಡವರಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದ್ದಾರೆ.
ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್ ಪಾಟೀಲ ಅವರು, ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಹೇಳಿರುವ ಆಡಿಯೋ ವೈರಲ್ ಆಗಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಅವರೊಂದಿಗೆ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ತಮ್ಮ ಕ್ಷೇತ್ರದಲ್ಲಿಯೇ 900ಕ್ಕೂ ಹೆಚ್ಚು ಮನೆಗಳನ್ನು ಹಣ ಪಡೆದು ಹಂಚಲಾಗಿದೆ ಎಂದು ಹೇಳಿರುವ ಆಡಿಯೋ ಇದೀಗ ಎಲ್ಲೆಡೆ ಸದ್ದು ಮಾಡುತ್ತಿದೆ.