ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂಪರಪ್ಪ ಪತ್ನಿ ಸಾವಿನ ವಿಚಾರವನ್ನು ಸಚಿವ ಭೈರತಿ ಸುರೇಶ್ ಪ್ರಸ್ತಾಪಿಸಿದ್ದಾರೆ. ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಎಸ್ವೈ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಿಸ್ಟರ್ ಭೈರತಿ ಸುರೇಶ್ ಅವರೇ, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವುದು ಗಾದೆ ಮಾತು. ಆದರೆ, ನೀವು ಹಾಗೂ ನಿಮ್ಮ ಮುಖ್ಯಮಂತ್ರಿಗಳ ಮೈಯಲ್ಲಾ ಭ್ರಷ್ಟತೆಯ ಹುಣ್ಣು ತುಂಬಿಕೊಂಡು ನಾರುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದು, ಒಂದರ ಮೇಲೊಂದು ತನಿಖೆಗಳು ನಡೆಯುತ್ತಲೇ ಇವೆ. ಕರ್ನಾಟಕದ ಇತಿಹಾಸದಲ್ಲಿ ಅನೈತಿಕತೆಯನ್ನು ಕತ್ತಿಗೆ ಕಟ್ಟಿಕೊಂಡು ಸರ್ಕಾರ ನಡೆಸುತ್ತಿರುವ ಇತಿಹಾಸ ನಿರ್ಮಿಸಿದ ದಾಖಲೆ ನಿಮಗೆ ಹಾಗೂ ನಿಮ್ಮ ಮುಖ್ಯಮಂತ್ರಿಗಳಿಗೆ ಸಲ್ಲುತ್ತದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಮಿಸ್ಟರ್ @byrathi_suresh ಅವರೇ,
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವುದು ಗಾದೆ ಮಾತು, ಆದರೆ ನೀವು ಹಾಗೂ ನಿಮ್ಮ ಮುಖ್ಯಮಂತ್ರಿಗಳ ಮೈಯೆಲ್ಲಾ ಭ್ರಷ್ಟತೆಯ ಹುಣ್ಣು ತುಂಬಿಕೊಂಡು ನಾರುತ್ತಿದೆ. ಒಂದರ ಮೇಲೊಂದು ತನಿಖೆಗಳು ನಡೆಯುತ್ತಲೇ ಇವೆ, ಕರ್ನಾಟಕದ ಇತಿಹಾಸದಲ್ಲಿ ಅನೈತಿಕತೆಯನ್ನು ಕತ್ತಿಗೆ ಕಟ್ಟಿಕೊಂಡು ಸರ್ಕಾರ ನಡೆಸುತ್ತಿರುವ…
— Vijayendra Yediyurappa (@BYVijayendra) October 20, 2024