ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ಯುವಕನೊಬ್ಬನ ಕೊಲೆಯಾಗಿದೆ. ಸಂಧಾನಕ್ಕೆ ಎಂದು ಕರೆದುಕೊಂಡು ಹೋಗಿ ಹತ್ಯೆ ಮಾಡಲಾಗಿದೆ. ಜೆ.ಜೆ ನಗರದ ಜನತಾ ಕಾಲೋನಿಯಲ್ಲಿ ಕೊಲೆ ನಡೆದಿದ್ದು, ವಿಜಯ್(26) ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ. ನಿನ್ನೆಯಷ್ಟೇ ಈತ ಜೈಲಿನಿಂದ ಬಿಡುಗಡೆಯಾಗಿದ್ದ.
ಹಳೆಯ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಸಂಧಾನ ಮಾತುಕತೆಗೆ ಎಂದು ವಿಜಯನನ್ನು ಕರೆದುಕೊಂಡು ಹೋಗಲಾಗಿದೆ. ಆದರೆ, ಅಲ್ಲಿ ಆತನನ್ನು ಕೊಲೆ ಮಾಡಲಾಗಿದೆ. ಜೆ.ಜೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.