ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಮೈಸೂರು ದಸರಾ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಒಂದಲ್ಲ ಒಂದು ಚರ್ಚೆಗಳು ನಡೆಯುತ್ತಿವೆ. ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವ ವಿಚಾರಕ್ಕೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಚಾಮುಂಡಿ ತಾಯಿ ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವರಿ ಎಚ್ಚರ ಎಂದಿದ್ದಾರೆ.
ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ನಿಮ್ಮ ಪಕ್ಷದಲ್ಲಿ ನಿಮಗೆ ಎದುರಾಗಿರುವ ಕಂಟಕದಿಂದ ಪಾರಾಗಲು ಚಾಮುಂಡಿ ಬೆಟ್ಟ ಹಾಗೂ ಸಂಪ್ರದಾಯದ ದಸರೆಯನ್ನು ಬಳಸಿಕೊಳ್ಳಬೇಡಿ. ಬಂಡೆಯೆಂದು ಬೀಗುತ್ತಿದ್ದ ನೀವು ಈಗಾಗ್ಲೇ ಮುದ್ದೆಯಾಗಿ ಹೋಗಿದ್ದೀರಿ. ಪೈಪೋಟಿ ಮೇಲೆ ನೀವು, ನಿಮ್ಮ ಕಾಂಗ್ರೆಸಿಗರು ಹಿಂದೂ ಧರ್ಮದ ಅವಹೇಳನ, ಹಿಂದೂ ಧಾರ್ಮಿಕ ಕೇಂದ್ರಗಳ ಅಪಪ್ರಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದೀರಿ. ಇದೀಗ ಹಿಂದೂ ಪರಂಪರೆಯ ವಿಜಯ ದಶಮಿ ಹಬ್ಬವನ್ನು ಮಲಿನ ಮಾಡಲು ಹೊರಟಿದ್ದೀರಿ. ಮಹಿಷಾಸುರ ಮರ್ದಿನಿ ನಿಮ್ಮನ್ನು ಮರ್ದನ ಮಾಡುವ ಕಾಲ ದೂರವಿಲ್ಲ. ಚಾಮುಂಡಿ ತಾಯಿ ಶ್ರದ್ಧೆಯ ಭಕ್ತರ ಸ್ವತ್ತು. ಅದನ್ನು ಮುಟ್ಟಲು ಹೋದರೆ ಕಾದಿದೆ ನಿಮಗೆ ಆಪತ್ತು.