ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ನಡೆದಿದೆ. ಜಯಶ್ರೀ ಭಗವಂತರಾಯ ಮಾಗಣಗೇರ(21) ಅನ್ನೋ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ಸಂಜೆ ಸುಮಾರು 6.30ರ ವೇಳೆ ಯುವತಿ ಬಾವಿಗೆ ಹಾರಿದ್ದಾಳೆ ಅಂತಾ ಗ್ರಾಮಸ್ಥರು ಹೇಳುತ್ತಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿ ಸೋಮವಾರ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಪಿಎಸ್ಐ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಪ್ರಿಲ್ 27ರಂದು ಯುವತಿಯ ಮದುವೆ ನಿಶ್ಚಿಯವಾಗಿತ್ತಂತೆ. ಆದರೆ, ಇದೀಗ ನೋಡಿದರೆ ಇಂತಹದೊಂದು ದುರಂತ ನಡೆದಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




