ಪ್ರಜಾಸ್ತ್ರ ಸುದ್ದಿ
ಕಠ್ಮಂಡು(Kathmandu): ನೇಪಾಳದಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸುವುದು ಹಾಗೂ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆಗೆ ಆಗ್ರಹಿಸಿ ಯುವಕರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಮಂಗಳವಾರವೂ ಪ್ರತಿಭಟನೆ ಮುಂದುವರೆದಿದೆ. ಮನೆ, ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದ್ದು, ಅಪಾರ ಪ್ರಮಾಣದಲ್ಲಿ ನಾಶವಾಗಿರುವುದು ಮಾಧ್ಯಮ ಸಂಸ್ಥೆಗಳ ಮೂಲಕ ತಿಳಿದು ಬಂದಿದೆ. ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ಕಡೆ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ನೇಪಾಳದ ಹಲವು ನಗರಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಇನ್ನು ಸಿಪಿಎನ್-ಎಂಸಿ ಅಧ್ಯಕ್ಷೆ ಪುಷ್ಪಾ ಕಮಲ್ ದಹಲ್, ಸಚಿವ ಪೃಥ್ವಿ ಸುಬ್ಬಾ ಗುರುಂಗ್, ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಸೇರಿ ಅನೇಕರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೆಂಕಿ ಹೆಚ್ಚಲಾಗಿದೆ. ಈ ಬಗ್ಗೆ ಪ್ರಧಾನಿ ಓಲಿ ಮಾಧ್ಯಮ ಪ್ರಕಟಣೆ ನೀಡಿದ್ದು, ದೇಶದಲ್ಲಿ ಪರಿಸ್ಥಿತಿಯನ್ನು ತಿಳಿದುಕೊಳ್ಳಲು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಜೆ 6 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದೇನೆ ಎಂದಿದ್ದಾರೆ.